ಮಹಾರಾಷ್ಟ್ರ ಮೈತ್ರಿ ಸರ್ಕಾರ ಮೂಹರ್ತವಿಟ್ಟ್ರಾ;ರಮೇಶ ಜಾರಕಿಹೊಳಿ ದೇವಿಂದ್ರ ಫಡ್ನವೀಸ್?

ಹೊಸ ದೆಹಲಿ– ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ತನ್ನ ವೈಫಲ್ಯಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಚಳಿಬಿಡಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಮಾಡುತ್ತಿದೆ.
ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವಿ ಮುಖಂಡ, ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮಧ್ಯೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದಿದೆ.
ನವದೆಹಲಿಯ ಗೌಪ್ಯಸ್ಥಳದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ದೇವೇಂದ್ರ ಫಡ್ನವಿಸ್ ಮಧ್ಯೆ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸೂಚನೆಯಂತೆಯೇ ಹಲವಾರು ವಿಷಯಗಳನ್ನು ಈ ಉಭಯ ನಾಯಕರು ಚರ್ಚಿಸಿದ್ದಾರೆ.
ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಭಾಜಪ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿದ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದಲ್ಲೂ ತಮ್ಮ ಹಿಡಿತ ಹೊಂದಿದ್ದು, ಪ್ರಭಾವಿ ನಾಯಕರ ಮಧ್ಯದ ಭೇಟಿ ಶಿವಸೇನಾ ಮತ್ತು ಕಾಂಗ್ರೆಸ್, ಎನಸಿಪಿ ವಲಯದಲ್ಲಿ ಭೀತಿ ಸೃಷ್ಟಿಸಿದೆ.
ಇದೇ ರಮೇಶ್ ಜಾರಕಿಹೊಳಿ ರಾಜ್ಯದಲ್ಲಿನ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಪತನಕ್ಕೆ ಕಾರಣರಾಗಿದ್ದರು. ರಮೇಶ್ ಜಾರಕಿಹೊಳಿ ಮತ್ತರ ಟೀಂ ಮಹಾರಾಷ್ಟ್ರ ದ ಮುಂಬೈನ ಐಶಾರಾಮಿ ಹೋಟೆಲ್ ನಲ್ಲಿ ವಾಸ್ತವ್ಯ ಹೊಡಿದ್ದರು. ಆಗ ಗೋಕಾಕ ಸಾಹುಕಾರ್ ರಮೇಶ್ ಜಾರಕಿಹೊಳಿ ಟೀಮ್ ಗೆ ಅಂದಿನ ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಬೆನ್ನಿಗೆ ನಿಂತಿತ್ತು. ಅಲ್ಲದೇ ಅಂದಿನ ಮಹಾ ಸಿಎಂ ದೇವೇಂದ್ರ ಫಡ್ನವಿಸ್ ರಮೇಶ್ ಜಾರಕಿಹೊಳಿ ತಂಡಕ್ಕೆ ಸಂಪೂರ್ಣವಾಗಿ ಪರೋಕ್ಷ ಬೆಂಬಲ, ರಕ್ಷಣೆ ನೀಡಿದ್ದರು. ಇದರ ಪರಿಣಾಮ ಕರ್ನಾಟಕದಲ್ಲಿ ಮತ್ತೆ ಬಿಎಸವೈ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಅನರ್ಹತೆ ಹಣೆ ಪಟ್ಟದಿಂದ ಅರ್ಹ ಶಾಸಕರಾಗಿ, ಪ್ರಭಾವಿ ಮಂತ್ರಿಯಾಗಿದ್ದಾರೆ ರಮೇಶ್ ಜಾರಕಿಹೊಳಿ. ಇದೇ ಕಾರಣಕ್ಕೆ ರಮೇಶ್ ಜಾರಕಿಹೊಳಿಗೆ ಮಹಾರಾಷ್ಟ್ರ ರಾಜಕಾರಣದ ಬೆಳವಣಿಗೆ ಮೇಲೆ ನಿಗಾ ಇಡುವಂತೆ ಪಕ್ಷದ ಹೈಕಮಾಂಡ ಸೂಚಿಸಿದೆ. ಸದ್ಯದಲ್ಲೇ ಮತ್ತೆ ಮಹಾರಾಷ್ಟ್ರ ದಲ್ಲೂ ರೆಸಾರ್ಟ್ ರಾಜಕಾರಣ ಆರಂಭವಾದ್ರು ಅಚ್ಚರಿ ಪಡಬೇಕಿಲ್ಲ.