ಬಿಎಸವೈ ಮುಖ್ಯಮಂತ್ರಿ; ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ-ಡಿಸಿಎಂ ಲಕ್ಷ್ಮಣ ಸವದಿ

ಮಹಾಂತೇಶ ಇರಳಿ
ಅಥಣಿ- ಬಿ.ಎಸ.ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿ ಮುಂದೊರೆಯುತ್ತಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಸವದಿ, ಮುಂದಿನ ಅವಧಿವರೆಗೂ ಮುಖ್ಯಮಂತ್ರಿಯಾಗಿ ಬಿ. ಎಸ್. ಯಡಿಯೂರಪ್ಪನವರೇ ಮುಂದುವರೆಯುವ ತೀರ್ಮಾನ ಆಗಿದೆ. ಸಿಎಂ ಯಡಿಯೂರಪ್ಪನವರ ದೆಹಲಿ ಪ್ರವಾಸ ವಿಚಾರಕ್ಕೆ ರಾಜಕೀಯ ಅರ್ಥಬೇಡ. ರಾಜ್ಯದ ಅಭಿವೃದ್ಧಿ ಹಾಗೂ ಕೇಂದ್ರ ಸರ್ಕಾರದ ಹಣಕಾಸಿನ ಬಿಡುಗಡೆ ಬಗ್ಗೆ ಸಮಾಲೋಚನೆಗೆ ತೆರಳಿದ್ದಾರೆ.
ಕೇಂದ್ರ ಸಚಿವರನ್ನ ಭೇಟಿ ಮಾಡಿರುವುದು ರಾಜ್ಯದ ಅಭಿವೃದ್ಧಿ ಹಾಗೂ ಹೆಚ್ಚಿನ ಹಣಕಾಸು ಬಿಡುಗಡೆಗೆ ನಡೆಯುವ ಸಾಮನ್ಯ ಪ್ರಕ್ರಿಯೆ. ರಾಜ್ಯ ಮಂತ್ರಿಮಂಡಲ ವಿಸ್ತರಣೆ ಅಥವಾ ಪುನರ್ರಚನೆ ವಿಚಾರ ಬಗ್ಗೆಯೂ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ನಡೆಸಿ ನಿರ್ಧಾರ ಮಾಡ್ತಾರೆ. ಪಕ್ಷದ ವರಿಷ್ಠರ ಒಪ್ಪಿಗೆ ಪಡೆದು ರಾಜ್ಯದ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ತೀರ್ಮಾನ ಮಾಡಲಿದ್ದಾರೆ.
ಮುಖ್ಯಮಂತ್ರಿಯವರ ಯಾವುದೇ ತೀರ್ಮಾನಕ್ಕೆ ನಮ್ಮೆಲ್ಲರ ಸಹಮತ ಇದೆ. ಇನ್ನು ಸಚಿವ ರಮೇಶ್ ಜಾರಕಿಹೊಳಿ ಮಹರಾಷ್ಟ್ರದ ಬಿಜೆಪಿ ಮುಖಂಡರ ಭೇಟಿ ಮಾಡಿರುವುದು ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಲು ಇರಬಹುದು. ಮಹಾರಾಷ್ಟ್ರದಲ್ಲಿ ಯಾವುದೇ ಆಪರೇಷನ್ಗೆ ಭೇಟಿ ಮಾಡಿಲ್ಲ.
ಉತ್ತರ ಕರ್ನಾಟಕದ ಭಾಗದಿಂದ ಮುಖ್ಯಮಂತ್ರಿ ಆಗ್ತಾರೆ ಎಂಬ ವಿಚಾರವನ್ನ ಡಿಸಿಎಂ ಸವದಿ ತಳ್ಳಿ ಹಾಕಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಎಂಬುದು ಊಹಾಪೋಹ, ಬರಿ ಗಾಳಿಮಾತು ಅಷ್ಟೇ. ಮುಂದಿನ ಅವಧಿವರೆಗೆ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಅಥಣಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.