ಖಡಕ್ ಎಚ್ಚರಿಕೆ ಕೊಟ್ಟ ಸಚಿವೆ ಶಶಿಕಲಾ ಜೋಲ್ಲೆ

ಮಹಾಂತೇಶ ಇರಳಿ
ವಿಜಯಪುರ: ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಶಶಿಕಲಾ ಜೋಲ್ಲೆ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಯಿತು.
ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತುತ ಎದುರಾಗಿರುವ ನೆರೆಹಾವಳಿ ಹಾಗೂ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಸಲಹೆ ಸೂಚನೆಯನ್ನ ಸಚಿವೆ ಜೋಲ್ಲೆ ನೀಡಿದರು.
ಪಕ್ಷಾತೀತವಾಗಿ, ತಾರತಮ್ಯ ಮಾಡದೇ ನೆರೆ ಸಂತ್ರಸ್ತರಿಗೆ ಎದುರಾದ ಸಮಸ್ಯೆ, ಬೆಳೆ ಹಾನಿ ಬಗ್ಗೆ ಸಂಕ್ಷಿಪ್ತವಾಗಿ ಸರ್ವೇ ಮಾಡಿ ಅವರಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ನೆರೆಯಿಂದಾಗಿ ಸಂಕಷ್ಟಕ್ಕೊಳಗಾದ ಗರ್ಭಿಣಿಯರು ಹಾಗೂ ಬಾಣಂತಿಯರ ಮೇಲೆ ವಿಶೇಷ ಕಾಳಜಿ ವಹಿಸಬೇಕು ಎಂದು ನನ್ನ ಇಲಾಖೆಯ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈಗಾಗಲೇ ನನ್ನ ಜಿಲ್ಲೆಯ ಕೆಲ ನೆರೆ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರ ಸಮಸ್ಯೆಯನ್ನು ಮನಗಂಡಿದ್ದೇನೆ. ಈ ನಿಟ್ಟಿನಲ್ಲಿ ತಾವೆಲ್ಲರೂ ಸಂತ್ರಸ್ತರ ಕರೆಗೆ ಓಗೊಟ್ಟು, ಅವರಿಗೆ ತೊಂದರೆಯಾಗಂದಂತೆ ಕಾಳಜಿ ವಹಿಸಬೇಕು ಎಂದು ತಿಳಿಸಲಾಯಿತು. ಇದೇ ವೇಳೆಯಲ್ಲಿ ಕೋವಿಡ್-19 ನಿಯಂತ್ರಣದ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಮಾಹಿತಿ ಪಡೆದು, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಎಂ.ಸಿ ಮನಗೂಳಿ, ಜಿಲ್ಲಾಧಿಕಾರಿ ಸುನೀಲ್ ಕುಮಾರ್, ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ರಾಹುಲ್ ಶಿಂಧೆ, ಆಪ್ತ ಕಾರ್ಯದರ್ಶಿಗಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.