ಕರ್ನಾಟಕ
ಲಕ್ಷ್ಮಣ ಸವದಿಗೆ ಫುಲ್ ಮಾರ್ಕ್ಸ್ ಕೊಟ್ಟ ರಾಜಾಹುಲಿ

ಶ್ರೀನಿವಾಸ ಪಟ್ಟಣ
ಬೆಂಗಳೂರು: ವಿಧಾನಸೌಧಕ್ಕೆ ಹೈಟೆಕ್ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ. ಹೈಟೆಕ್ ಬಸ್ ಕಂಡು ಮುಖ್ಯಮಂತ್ರಿ ಯಡಿಯೂರಪ್ಪ ಫುಲ್ ಖುಷ. ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿಗೆ ಫುಲ್ ಮಾರ್ಕ್ಸ್ ನೀಡಿದ ದೊರೆ.
ಇಂದು ಬೆಂಗಳೂರಿನ ಶಾಂತಿ ನಗರದಲ್ಲಿರುವ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದಿಂದ ವಿಧಾನಸೌಧದವರೆಗೆ ಎಲೆಕ್ಟ್ರಿಕ್ ಬಸ್ಸುಗಳ ಪ್ರಾಯೋಗಿಕ ಸಂಚಾರ ನಡೆಸಿದವು.ಈ ಹೈಟೆಕ್ ಬಸ್ ಸ್ಟೇರಿಂಗ್ ಹಿಡಿದು ಪ್ರಾಯೋಗಿಕ ಸಂಚಾರಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಚಾನಲೆ ನೀಡಿದ್ರು.
ಅಲ್ಲದೇ ಈ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಕ್ಷಮತೆಯನ್ನ ಪರಿಶೀಲಿಸಿದ್ರು.
ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲೆಕ್ಟ್ರಿಕ್ ಬಸ್ಸುಗಳನ್ನು ವೀಕ್ಷಿಸಿ ನೂತನ ವ್ಯವಸ್ಥೆ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶ್ರೀ ಶಿವಯೋಗಿ ಕಳಸದ್, ಬಿಎಂಟಿಸಿ ಹಿರಿಯ ಅಧಿಕಾರಿಗಳು ಇದ್ದರು.