ಉಮೇಶ ಕತ್ತಿ ಆಫರ್ ಕೊಟ್ಟಿದ್ದು ಯಾರಿಗೆ!!?

ಶ್ರೀನಿವಾಸ ಪಟ್ಟಣ
ಬೆಳಗಾವಿ: ಮಾಜಿ ಮಂತ್ರಿ, ಕಾಂಗ್ರೆಸನ ಹಿರಿಯ ಮುಖಂಡ ಪ್ರಕಾಶ ಹುಕ್ಕೇರಿಗೆ ಬಿಜೆಪಿ ಪಕ್ಷಕ್ಕೆ ಬಂದ್ರೆ ಸ್ವಾಗತಿಸುತ್ತೇನೆ ಎಂದು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಪ್ರಕಾಶ ಹುಕ್ಕೇರಿ ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಉಮೇಶ ಕತ್ತಿ, ನೇರವಾಗಿಯೇ ಪ್ರಕಾಶ ಹುಕ್ಕೇರಿಗೆ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ
ಪ್ರಕಾಶ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಬದಲು, ಬೆಳಗಾವಿ ಲೋಕಸಭೆಗೆ ದಿವಂಗತ ಸುರೇಶ ಅಂಗಡಿ ಕುಟುಂಬ ಅವಿರೋಧ ಆಯ್ಕೆಗೆ ಶ್ರಮಿಸಲಿ. ಈ ಬಗ್ಗೆ ಹುಕ್ಕೇರಿ ಕಾಂಗ್ರೆಸ್ ಹೈ ಕಮಾಂಡ ಜೊತೆ ಚರ್ಚಿಸಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಯದಂತೆ ನೋಡಿಕೊಳ್ಳಲಿ. ಈ ಬಗ್ಗೆ ಹುಕ್ಕೇರಿಯವರು ಕಾಂಗ್ರೆಸ್ ಹೈ ಕಮಾಂಡ್ ಜೊತೆ ಚರ್ಚಿಸಿ ಆದಷ್ಟು ಬೇಗ ನಿರ್ಣಯ ತೆಗೆದುಕೊಳ್ಳುವಂತೆ ಮಾಡಬೇಕು. ಅಲ್ಲದೇ ಪ್ರಕಾಶ ಹುಕ್ಕೇರಿ ಹೇಳಿಕೆಯಿಂದ ನನಗೆ ಸಂತೋಷವಾಗಿದೆ.ಸುರೇಶ ಅಂಗಡಿ ಅವರ ಪತ್ನಿಯನ್ನ ಅವಿರೋಧ ಆಯ್ಕೆ ಮಾಡುವ ಮೂಲಜ ಹೊಸ ಇತಿಹಾಸವನ್ನು ನಿರ್ಮಿಸಬೇಕಿದೆ. ನಾವು ಸಹ ಸುರೇಶ ಅಂಗಡಿ ಪತ್ನಿ ಅವರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡಗೆ ಮನವಿ ಮಾಡುತ್ತೇನೆ. ಇನ್ನೂ ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬಂದರೆ ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ಉಮೇಶ ಕತ್ತಿ ಹೇಳಿದ್ದಾರೆ.