ಸುವರ್ಣ ಸೌಧ ಮುಂದೆ ಪಂಚಮಸಾಲಿ ಶ್ರೀಗಳಿಂದ ಉಪವಾಸ ಸತ್ಯಾಗ್ರಹ

ಮಹಾಂತೇಶ ಇರಳಿ
ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನ ಸೌಧ ಮುಂದೆ ಪಂಚಮಸಾಲಿ ಸಮುದಾಯದ ಶ್ರೀಗಳ ನೇತೃತ್ವದಲ್ಲಿ ಮೀಸಲಾತಿಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಬೆಳಗಾವಿ ಸುವರ್ಣ ವಿಧಾನ ಸೌಧದ ಹೊರಗಿನ ಆವರಣದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭ ನಡೆಸುತ್ತಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಉಪವಾಸ ಸತ್ಯಾ ನಡೆಸುತ್ತಿದ್ದಾರೆ. ಉಪವಾಸ ಸತ್ಯಾಗ್ರಹದ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ.
ತಕ್ಷಣವೇ ಲಿಂಗಾಯತ ಪಂಚಮಸಾಲಿ ಸಮುದಾಯದ ಜನರಿಗೆ ಆಗುತ್ತಿರುವ ಅನ್ಯಾಯವನ್ನ ಸರಿ ಪಡಿಸಬೇಕು. ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ 2A ಹಾಗೂ ಕೇಂದ್ರ ಸರ್ಕಾರದಿಂದ ಓಬಿಸಿ ಮೀಸಲಾತಿ ನೀಡಲು ಒತ್ತಾಯಿಸುತ್ತಿದ್ದಾರೆ. ಈ ಸಾಂಕೇತಿಕ ಧರಣಿಯಲ್ಲಿ ಪಂಚಮಸಾಲಿ ಸಮುದಾಯದ ಹಾಲಿ ಮಾಜಿ ಶಾಸಕರು, ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಸರ್ಕಾರದ ಪರವಾಗಿ ಡಿಸಿಎಂ ಲಕ್ಷ್ಮಣ ಸವದಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸೇರಿ ಶಾಸಕರು, ಸಂಸದರು ಆಗಮಿಸಿ ಮನವಿ ಸ್ವೀಕರಿಸಲಿದ್ದಾರೆ.