ಮತ್ತೆ ಭವಿಷ್ಯ ನುಡಿದ ಉಮೇಶ ಕತ್ತಿ..!

ಶ್ರೀನಿವಾಸ ಪಟ್ಟಣ
ಬೆಳಗಾವಿ: ಆರ.ಆರ.ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಖಚಿತವಾಗಿದೆ ಎಂದು ಮಾಜಿ ಸಚಿವ ಉಮೇಶ ಕತ್ತಿ ಭವಿಷ್ಯ ನುಡದಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಎರಡು ಮತಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಜಯ ಸಾಧಿಸಲಿದೆ. ಆರ್ ಆರ್ ನಗರದಲ್ಲಿ 50 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಲಿದ್ದು, ಇತ್ತ ಶಿರಾದಲ್ಲಿ 25 ಸಾವಿರ ಮತಗಳ ಅಂತರದಿಂದ ಬಿಜೆಪಿಗೆ ಗೆಲುವಾಗಲಿದೆ. ಈ ಎರಡು ಉಪಚುನಾವಣೆ ಫಲಿತಾಂಶದಿಂದ ಭಾರತೀಯ ಜನತಾ ಪಾರ್ಟಿಗೆ ಇನ್ನಷ್ಟು ಶಕ್ತಿ ಬರಲಿದೆ. ಅಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪನವರು ಇನ್ನಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡಲು ಸಾಧ್ಯವಾಗಲಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇನ್ನಷ್ಟು ಉತ್ತಮ ಆಡಳಿತ ನೀಡಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಅಸ್ತಿತ್ವವನ್ನೆ ಸಂಪೂರ್ಣವಾಗಿ ಕಳೆದುಕೊಂಡಿದೆ. ಬಿಜೆಪಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುವುದನ್ನ ಕಾಂಗ್ರೆಸ್ ನಾಯಕರು ಬಿಡಬೇಕು. ಭ್ರಷ್ಟಾಚಾರದ ಆರೋಪ ಮಾಡುವ ಕೈ ನಾಯಕರು ಅದನ್ನ ಸಾಬೀತು ಪಡಿಸಬೇಕು ಹೊರತು ಜನರಿಗೆ ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸವನ್ನ ಮಾಡಬಾರದೆಂದು ಕಿಡಿಕಾರಿದ್ದಾರೆ.