ಗಂಡಾಗಲಿ ಹೆಣ್ಣಾಗಲಿ ಕ್ಷೇತ್ರದ ಅಭಿವೃದ್ಧಿಗಾಗಿ ಮಕ್ಕಳಿಗೆ ಶಿಕ್ಷಣ ಕೊಡ್ಸಿ;ಶಾಸಕಿ ಲಕ್ಷ್ಮೀ ಹೆಬ್ಬಾಳಕರ


ಮಹಾಂತೇಶ ಇರಳಿ
ಬೆಳಗಾವಿ: ಗಂಡಾಗಲಿ ಹೆಣ್ಣಾಗಲಿ ಮಕ್ಕಳಿಗೆ ಶಿಕ್ಷಣವನ್ನ ಕೊಡ್ಸಿ ಎಂದು ಕಾಂಗ್ರೆಸ್ ವಕ್ತಾರೆ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಭಾನುವಾರ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ
ಕಂಗ್ರಾಳಿ ಬಿ ಕೆ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಹೆಚ್ಚುವರಿಯಾಗಿ 6 ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರ ಹಿಂದುಳಿಯಲು ಶೈಕ್ಷಣಿಕ ಸೌಲಭ್ಯವೇ ಕಾರಣವಾಗಿದೆ. ಬಡ ಕುಟುಂಬದ ಬಹುಪಾಲು ಶಿಕ್ಷಣದಿಂದ ದೂರ ಉಳಿದಿದ್ದಾರೆ. ಎಲ್ಲಿ ಮಕ್ಕಳನ್ನು ದೂರದ ಊರಿಗೆ ಕಳಿಸಿ ಶಿಕ್ಷಣ ಕೊಡಿಸುವುದು ಎಂಬ ಮನೋಭಾವನೆಯಿದೆ. ಇದೇ ಕಾರಣಕ್ಕೆ ಉನ್ನತ ಶಿಕ್ಷಣದಿಂದ ಬಹಳಷ್ಟು ಮಕ್ಕಳು ವಂಚಿತರಾಗಿದ್ದಾರೆ. ಅದರಲ್ಲೂ ಹೆಣ್ಣು ಮಕ್ಕಳು ಶಿಕ್ಷಣದಿಂದ ವಿಮುಖರಾಗಿದ್ದಾರೆ.

ಆದ್ದರಿಂದ ಬೆಳಗಾವಿ ಗ್ರಾಮೀಣ ಮತಕ್ಷೇತ್ರವೂ ಶೈಕ್ಷಣಿಕ ಪ್ರಗತಿ ಸಾಧಿಸಬೇಕಿದೆ. ಶೈಕ್ಷಣಿಕ ಪ್ರಗತಿಗಾಗಿ ನಾನು ಶ್ರಮಿಸುತ್ತಿರುವೆ. ಲಿಂಗ ಭೇದಭಾವ ಇಲ್ಲದೇ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು. ಆಗ ಬೆಳಗಾವಿ ಗ್ರಾಮೀಣ ಮತಕ್ಷೇತ್ರ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ, ಔದ್ಯೋಗಿಕವಾಗಿ, ರಾಜಕೀಯವಾಗಿ ಪ್ರಗತಿ ಸಾಧಿಸಲಿದೆ ಎಂದರು.
ಇನ್ನೂ ಕಾರ್ಯಕ್ರಮದಲ್ಲಿ ಗ್ರಾಮದಲ್ಲಿ ಹಿರಿಯರು, ಮುಖಂಡರು ಸೇರಿ ನೂರಾರು ಸಾಕ್ಷಿಯಾದ್ರು.