ಮತ್ತೆ ಕರ್ನಾಟಕ ಆಗಲಿದೆ ಲಾಕ್…?

ಕರ್ನಾಟಕ ಆಗಲಿದೆ ಲಾಕ್..? ಸಿಎಂ ಕೈಯಲ್ಲಿ ರಾಜ್ಯದ ಭವಿಷ್ಯ
ರಾಜ್ಯದಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿದೆ. ಕಠಿಣ ನಿಯಮ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಕೋವಿಡ್ ರಣಕೇಕೆ ನಿಯಂತ್ರಣ ಮಾಡಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಬಿಎಸ್ ಯಡಿಯುರಪ್ಪ ನವರು ಸಭೆ ನಡೆಸಲಿದ್ದಾರೆ.
ಸಿಎಂ ಬಿ.ಎಸ್ ಯಡಿಯುರಪ್ಪ ಅವರಿಗೆ ಕರೋನಾ ಪಾಸಿಟಿವ್ ಇರುವ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರು ಇಂದು ನಡೆಯುವ ಸಭೆಯಲ್ಲಿ ಆನ್ ಲೈನ್ ಮೂಲಕ ಭಾಗ ವಹಿಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಡೆಯಲಿದ್ದು. ಸಭೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಸ್ಥಿತಿಗತಿಗಳ ಕುರಿತಾಗಿ ಚರ್ಚೆ ನಡೆಯಲಿದೆ.
ಕಠಿಣ ರೂಲ್ಸ್ ಜಾರಿಗೆ ಸರ್ಕಾರ ಚಿಂತನೆ.
ಈಗಾಗಲೆ ಮದುವೆ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ. ಒಳಾಂಗಣ ಮದುವೆ ಕಾರ್ಯಕ್ರಮದಲ್ಲಿ 100 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹೊರಾಂಗಣಕ್ಕೆ 200 ಮಂದಿಗೆ ಅವಕಾಶ ನೀಡಲಾಗಿದೆ. ಇದೇ ರೀತಿಯಲ್ಲಿ ಇನ್ನಿತರ ಕಾರ್ಯಕ್ರಮಗಳಿಗೂ ನಿರ್ಬಂಧವನ್ನು ಈಗಾಗಲೇ ವಿಧಿಸಲಾಗಿದೆ.
ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಚಿತ್ರಮಂದಿರಗಳಿಗೆ ಲಾಕ್ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ನಿರ್ಧಾರ ಕೈಗೊಂಡಿಲ್ಲ. ಅದರ ಜೊತೆಗೆ ಧಾರ್ಮಿಕ ಕೇಂದ್ರಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ.
ಅಲ್ಲದೆ ಬಾರ್, ರೆಸ್ಟೋರೆಂಟ್, ಪಬ್ ಲಾಕ್ ಬೀಳುವ ಸಾಧ್ಯತೆ ಅಲ್ಲಗಳೆಯುವ ಹಾಗಿಲ್ಲ. ಜತೆಗೆ ಜನಜಂಗುಳಿ ಸೇರುವ ಎಲ್ಲಾ ಕಾರ್ಯಕ್ರಮಗಳು ನಿಷೇಧ ಹೇರುವುದು ಹಾಗೂ ರಾಜ್ಯಾಧ್ಯಂತ ಸೆಕ್ಷನ್ 144 ಜಾರಿ ಸಾಧ್ಯತೆ ಕೂಡಾ ಇವೆ..
ಆದರೆ ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಅಡಚಣೆ ಉಂಟಾಗದಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ ಒಂದು ನಿರ್ಧಾರವನ್ನು ಕೈಗೊಳ್ಳಬಹುದು.