ಜಿಲ್ಲಾ ಉಸ್ತುವಾರಿ ಸಚಿವರ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು

ಮಹಾಂತೇಶ ಇರಳಿ
ಬೆಳಗಾವಿ:ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿದ್ದು, ಜನರಿಗೆ ತೊಂದರೆ ಮಾಡುವುದು ಬೇಡಾ. ಕಠಿಣ ಕ್ರಮ ಕೈಗೊಳ್ಳಬೇಕು.
ಜಿಲ್ಲಾ ಉಸ್ತುವಾರಿ ಸಚಿವರು ಬರಬೇಕು. ಇಲ್ಲದಿದ್ದರೇ ನಾಲ್ಕು ಸಚಿವರಿದ್ದಾರೆ. ಅವರು ಒಮ್ಮತದಿಂದ ಬಂದು ಸಭೆ ಮಾಡಿ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.
ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವರು ಇರಬೇಕು ಎಂಬುವುದೆನಿಲ್ಲ. ಜಿಲ್ಲೆಯಲ್ಲಿ ಇರುವ ಮಂತ್ರಿಗಳು ಒಮ್ಮತದಿಂದ ಬಂದು ಕೋವಿಡ್ ನಿಯಂತ್ರಣಕ್ಕಾಗಿ ಸಭೆ ಮಾಡಬೇಕು ಎಂದು ತಿಳಿಸಿದರು.
ಸರ್ಕಾರ ತಮ್ಮದೆ ಆದ ಲೋಕದಲ್ಲಿದೆ. ಜನರ ಪರವಾಗಿ ಇಲ್ಲ. ಕೋವಿಡ್ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ. .ಸರ್ಕಾರ ಬಿಡುಗಡೆ ಮಾಡಿದರು ಮಾರ್ಗಸೂಚಿಯನ್ನು ಎಲ್ಲರೂ ಪಾಲನೆ ಮಾಡಬೇಕು.ಸಾಮಾಜಿಕ ಅಂತರ ಕಾಪಾಡಲು 144 ಜಾರಿ ಮಾಡಬೇಕು. ಅನಗತ್ಯ ಓಡಾಡ ಮಾಡುವುರನ್ನು ನಿಂತ್ರಿಸಬೇಕು ಎಂದು ಸಲಹೆ ನೀಡಿದರು
ಸಾರಿಗೆ ನೌಕರರ ಸಮಸ್ಯೆ ಸಾಕಷ್ಟಿದೆ. ಅವರ ಹೋರಾಟ ಹತ್ತಿಕ್ಕುವ ಕೆಲಸ ಸರಕಾರ ಮಾಡುತ್ತಿದೆ. ಈ ಹಿಂದೆಯೇ ಸರಕಾರ ಪತ್ರದ ಮೂಲಕ ಆರನೇ ವೇತನ ನೀಡಲಾಗುವುದು ಎಂದು ಹೇಳಿದರು. ಈಗ ನೀಡದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದರ ಬಗ್ಗೆ ನಮ್ಮ ವರಿಷ್ಠರ ಗಮನಕ್ಕೆ ತಂದು ಅವರ ಪರವಾಗಿ ನಿಲ್ಲುತ್ತೇವೆ ಎಂದರು.
“20 ವರ್ಷಗಳ ಬಳಿಕ ಬೆಳಗಾವಿ ಲೋಕಸಭಾ ಕ್ಷೇತ್ರ “ಕೈ”ಗೆ ಸೇರಲಿದೆ: ಸತೀಶ್ ಜಾರಕಿಹೊಳಿ”
ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಳ್ಳೆಯ ಕೆಲಸ ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ. ಕಳೆದ 20 ವರ್ಷಗಳಿಂದ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಈ ಬಾರಿ ವಶಪಡಿಸಿಕೊಳ್ಳುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಂಇಎಸ್ ಅಭ್ಯರ್ಥಿ ಸ್ಪರ್ಧೆ ಮಾಡಿರುವುದು ನಮಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ನಮ್ಮ ಮತಗಳು ನಮಗೆ ಇರುತ್ತವೆ. ಎಂಇಎಸ್ ಚುನಾವಣೆಗೆ ಸ್ಪರ್ಧೆ ಮಾಡುವುದು ಹೊಸತೇನಲ್ಲ. ಪ್ರತಿ ಬಾರಿಯಂತೆ ಅವರು ಈ ಬಾರಿಯೂ ಮಾಡಿದ್ದಾರೆ. ಅದರ ಪರಿಣಾಮ ಏನೂ ನಮಗೆ ಬಿರದು ಎಂದು ಸತೀಶ್ ಜಾರಕಿಹೊಳಿ ಅವರು ತಿಳಿಸಿದರು