ಕರ್ನಾಟಕ
ಜಿಲ್ಲೆ ಉಸ್ತುವಾರಿ; ಮಂಗಲ ಅಂಗಡಿ ಬಗ್ಗೆ ಸಚಿವ ಉಮೇಶ ಕತ್ತಿ ಹೇಳಿದ್ದೇನು

ಶ್ರೀನಿವಾಸ ಪಟ್ಟಣ
ಬೆಳಗಾವಿ: ಹಿಂದೆ ಜೆ.ಎಚ್.ಪಟೇಲರು, ಯಡಿಯೂರಪ್ಪ ಸಿಎಂ ಆಗಿದ್ದಾಗ ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿರುವೆ. ಜಿಲ್ಲಾ ಉಸ್ತುವಾರಿ ಮಂತ್ರಿ ಸ್ಥಾನ ಕೊಟ್ಟರು ಕೆಲಸ ಮಾಡ್ತಿನಿ. ಕೊಡದಿದ್ದರು ಜಿಲ್ಲೆ ಅಭಿವೃದ್ದಿಗಾಗಿ ಕೆಲಸ ಮಾಡುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಇಂದು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,ಲೋಕಸಭೆ ಚುನಾವಣೆಯಲ್ಲಿ10 ಲಕ್ಷ ದಷ್ಟು ಮತದಾನ ಆಗಿದೆ. ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ಎರಡುವರೆ ಲಕ್ಷದಿಂದ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬೆಳಗಾವಿಯಲ್ಲಿ ಸಚಿವ ಉಮೇಶ್ ಕತ್ತಿ ಅವರು ಹೇಳಿದ್ದಾರೆ.
ಬೆಳಗಾವಿ ಲೋಕಸಭೆಯ ಉಪ ಚುನಾವಣೆಯಲ್ಲಿ ಅನುಕಂಪದ ಅಲೆ, ಸುರೇಶ್ ಅಂಗಡಿ ಅಭಿವೃದ್ಧಿ ಕೆಲಸ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಶ್ರೀರಕ್ಷೆ ಆಗಲಿದೆ. ಸುರೇಶ್ ಅಂಗಡಿ ಪತ್ನಿ ಬಿಎಸ್ಸಿ ಪದವೀಧರೇ, ಮುಂದಿನ ಮೂರು ವರ್ಷ ಉತ್ತಮ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.