ಕರ್ನಾಟಕ

ಕರ್ತವ್ಯಕ್ಕೆ ಮರಳಿದ ಸಾರಿಗೆ ನೌಕರರ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದೇನು..?

ಶ್ರೀನಿವಾಸ ಪಟ್ಟಣ

ಬೆಂಗಳೂರು: ಸರ್ಕಾರದ ಮನವಿಗೆ ಓಗುಟ್ಟು ರಾಜ್ಯಾದ್ಯಂತ ಸಾರಿಗೆ ನಿಗಮಗಳ ಸುಮಾರು 13 ಸಾವಿರದಷ್ಟು ಬಸ್ಸುಗಳು ಸಂಚರಿಸಿರುವುದರಿಂದ ಸಾರ್ವಜನಿಕರು ಸಮಾಧಾನ ಪಡುವಂತ್ತಾಗಿದ್ದು,ಕರ್ತವ್ಯಕ್ಕೆ ಹಾಜರಾದ ನೌಕರರಿಗೆ ಧನ್ಯವಾದಗಳನ್ನು ತಿಳಿಸಬಯಸುತ್ತೇನೆ ಎಂದು ಡಿಸಿಎಂ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.‌

ಆರನೇ ವೇತನ ಜಾರಿ ಮಾಡುವಂತೆ ಪಟ್ಟು ಹಿಡಿದಿದ್ದ ಸಾರಿಗೆ ನೌಕರರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗಿದ್ದರಿಂದ ಸುಮಾರು 13 ಸಾವಿರಕ್ಕೂ ಹೆಚ್ಚು ಬಸ್ಸುಗಳು ಸಂಚರಿಸುವಂತಾಗಿದೆ.

ಮುಷ್ಕರದ ಸಂದರ್ಭದಲ್ಲಿಯೂ ಹಲವು ಸಾರಿಗೆ ನೌಕರರು ಸರ್ಕಾರದ ಮನವಿಗೆ ಸ್ಪಂದಿಸಿ ಕರ್ತವ್ಯಪ್ರಜ್ಞೆ ಮೆರೆದು, ಸಾರ್ವಜನಿಕರಿಗೆ ಸಂಕಷ್ಟದ ಕಾಲದಲ್ಲಿಯೂ ಸೇವೆ ಒದಗಿಸಲು ಶಕ್ತಿಮೀರಿ ಪ್ರಯತ್ನಿಸಿದ್ದಾರೆ. ಇಂತಹವರ ಕರ್ತವ್ಯ ನಿಷ್ಠೆ ಮತ್ತು ಪರಿಶ್ರಮವನ್ನು ನಾವು ಎಂದಿಗೂ ಮರೆಯುವುದಿಲ್ಲ ಮತ್ತು ಅವರ ಹಿತಾಸಕ್ತಿಗಳನ್ನು ರಕ್ಷಿಸುವತ್ತ ನಮ್ಮ ಸರ್ಕಾರ ಯಾವತ್ತೂ ಸಹಾನುಭೂತಿ ಹೊಂದಿರುತ್ತದೆ ಎಂಬುದನ್ನು ಮತ್ತೊಮ್ಮೆ ಈ ಸಂದರ್ಭದಲ್ಲಿ ಸ್ಪಷ್ಟಪಡಿಸುತ್ತೇನೆ.

ನಾಡಿನಲ್ಲಿ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಎಲ್ಲಾ ನೌಕರರ ಜವಾಬ್ದಾರಿಯಾಗಿದೆ. ಇದರಿಂದ ಕರ್ನಾಟಕದ ಸರ್ಕಾರಿ ಸಾರಿಗೆಯ ಗತ ವೈಭವ ಮತ್ತೆ ಮರುಕಳಿಸಲು ಸಾಧ್ಯವಾಗುತ್ತದೆ ಎಂದು ಲಕ್ಷ್ಮಣ ಸವದಿ ಅವರು ಅಭಿಪ್ರಾಯ ಪಟ್ಟಿದ್ದಾರೆ.‌

Related Articles

Leave a Reply

Your email address will not be published. Required fields are marked *

Back to top button
error: Content is protected !!