ಜಿಲ್ಲೆಗೆ ಹೊರರಾಜ್ಯದಿಂದ ಬರುವರಿಗೆ ನಿರ್ಭಂದ ಇಲ್ಲ: ನೆಗೆಟಿವ್ ರಿಪೋರ್ಟ್ ಕಡ್ಡಾಯ ಡಾ. ಕೆ. ಹರೀಶ ಕುಮಾರ.

ಮಹಾಂತೇಶ ಇರಳಿ
ಬೆಳಗಾವಿ:ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಯಾರ ಬೇಕಾದರು ಬರಬಹುದು, ಆದರೇ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. ಎಲ್ಲಿಂದ ಬಂದು ಎಲ್ಲಿಗೆ ಹೋಗುತ್ತಿರಿ ಎಂದು ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶ ಕುಮಾರ ತಳಿಸಿದರು.
ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿರುವ ಕೊಗನೋಳಿ ಚೆಕ್ ಪೋಸ್ಟಗೆ ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ ಅವರು, ಪರೀಶಿಲೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೋಗಿಗಳಿಗೆ ಔಷಧಿ ಹಾಗೂ ಆಮ್ಲಜನಕ ವ್ಯವಸ್ಥೆ ಮಾಡಿದ್ದೇವೆ. ನಮ್ಮ ಜಿಲ್ಲೆಯಲ್ಲಿ ಆಮ್ಲಜನಕ ಕೊರತೆ ಇಲ್ಲ.ಬೆರೆ ರಾಜ್ಯಕ್ಕೂ ನಾವು ಆಮ್ಲಜನಕ ಕಳುಹಿಸುತ್ತಿದೇವೆ. ನಮ್ಮ ಎಲ್ಲ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು, ಜಿಲ್ಲೆಯಲ್ಲಿ ಆಮ್ಲಜನಕ ಕೊರತೆ ವಿಚಾರವಾಗಿ ಮಾತನಾಡಿದರು.
ಜಿಲ್ಲೆಯಲ್ಲಿ ನಕಲಿ ಕೊರೊನಾ ಔಷಧಿ ಮಾರಾಟ ವಿಚಾರವಾಗಿ ಮಾತನಾಡಿದ ಅವರು, ನಾವು ನಮ್ಮ ಜಿಲ್ಲೆಯಾದ್ಯಂತ ತನಿಖೆ ನಡೆಸುತ್ತಿದ್ದು, ಐಜಿ ಬೆಳಗಾವಿ ಅವರ ನೇತೃತ್ವದಲ್ಲಿ ತನಿಖೆ ನಡೆಸುತ್ತಿದೇವೆ. ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರಿಗೆ ತೊಂದರೆ ಕೊಡದೆ ತನಿಖೆ ನಡೆಯುತ್ತಿದೆ.ಮಾರುಕಟ್ಟೆಯಲ್ಲಿ ಕೂಡ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟ ಪಡಿಸಿದರು.