ಕೊರೊನಾ ರೋಗಿಗಳ ನೆರವಿಗೆ ನಾವಿದ್ದೇವೆ ಎಂದ ಶಾಸಕ ಅನಿಲ್ ಬೆನಕೆ

ಬೆಳಗಾವಿ: ಬೆಡ್, ಸ್ಕಾನಿಂಗ್ ಮಷಿನ್ ಸೇರಿದಂತೆ ಮೂಲ ಸೌಕರ್ಯಗಳು ಜಿಲ್ಲಾಸ್ಪತ್ರೆಯಲ್ಲಿ ಕೊರತೆ ಇದೆ ಎಂದು ಜನರಿಗೆ ತಪ್ಪು ಸಂದೇಶ ನೀಡಲಾಗುತ್ತಿದೆ. ಆದರೆ ಅದು ಸತ್ಯಕ್ಕೆ ದೂರವಾಗಿದ್ದು, ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶಾಸಕ ಅನಿಲ್ ಬೆನಕೆ ಅವರು ತಿಳಿಸಿದ್ದಾರೆ.
ಇಂದು ಮಾದ್ಯಮಗಳ ಜೊತೆ ಮಾತನಾಡಿ, ಕೋವಿಡ್ ಕುರಿತು ಕೈ ಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 1030 ಬೆಡ್ ಕೋವಿಡ್ ಗಾಗಿ ಮಿಸಲೀಡಿಲಾಗಿದೆ. ಅದರಲ್ಲಿ 820 ಆಕ್ಸಿಜನ್ ವ್ಯೆವಸ್ಥೆ ಇರುವ ಬೆಡ್ ಗಳಿವೆ ಎಂದು ಅವರು ತಿಳಿಸಿದರು.
ಸದ್ಯ ಐಸಿಯುನಲ್ಲಿ 97 ಜನ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಗಾಗಲೇ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ 30 ಸಾವಿರ ಕೆಜಿಯ ಆಕ್ಸಿನ್ ಟ್ಯಾಂಕ್ ಅಳವಡಿಕೆ ಮಾಡಲಾಗಿದ್ದು, ಬೆಳಗಾವಿಯಲ್ಲಿ ಆಕ್ಸಿಜನ್ ಕೊರತೆ ಇಲ್ಲವೇ ಎಲ್ಲಾ. ಇದರ ಜೊತೆ ಹೆಚ್ಚುವರಿಯಾಗಿ ಆಕ್ಸಿಜನ್ ಸಿಲೆಂಡ್ ವ್ಯವಸ್ಥೆ ಕೂಡಾ ಮಾಡಲಾಗಿದೆ ಎಂದು ತಿಳಿಸಿದರು.
ಇಡೀ ಜಿಲ್ಲೆಯಲ್ಲಿ 22 ಕೋವಿಡ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಬೆಳಗಾವಿ ತಾಲೂಕಿನಲ್ಲಿ ಒಟ್ಟು ನಾಲ್ಕು ಕೋವಿಡ್ ಕೇರ್ ಸೇಂಟ್ ಇದ್ದು, ಅದರಲ್ಲಿ 3 ಸಾವಿರಕ್ಕೂ ಅಧಿಕ ಜನರಿಗೆ ಚಿಕಿತ್ಸೆ ನೀಡಬಹುದಾಗಿದೆ. ಜೊತೆಗೆ 14 ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡಾ ಚಿಕಿತ್ಸೆ ನೀಡಲಾಗುತ್ತಿದ್ದು, ಆ ಆಸ್ಪತ್ರೆಗಲ್ಲಿ 909 ಕೋವಿಡ್ ಬೆಡ್ ಮೀಸಲಿಡಲಾಗಿದೆ ಎಂದು ಅನಿಲ ಬೆನಕೆ ಮಾಹಿತಿ ನೀಡಿದರು.
ಜನರು ಸಹಕರಿಸಲು ಮನವಿ.
ಸರ್ಕಾರದ ಆದೇಶದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಬಂದ ಮಾಡಲು ಸರ್ಕಾರ ಆದೇಶ ಮಾಡಿದೆ. ದೇಶದಲ್ಲಿ ಹಾಗೂ ರಾಜ್ಯದ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಬೆಳಗಾವಿಯಲ್ಲಿ ಕರೋನಾ ಆಂತಕ ಹೆಚ್ಚಾಗಿದೆ. ಅದಕ್ಕಾಗಿ ಅಗತ್ಯ ಸೇವೆಗಳನ್ನು ಬಿಟ್ಟು ಉಳಿದೇಲ್ಲಾವನ್ನೂ ಬಂದ್ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಅನಿಲ ಬೆನಕೆ ಅವರು ಕೇಳಿಕೊಂಡರು.