ಕೋವಿಡ್ ಮಾರ್ಗಸೂಚಿ ಪಾಲನೆಗೆ ಕ್ರಮ ಕೈಗೊಳ್ಳಿ: ಡಿಸಿಗೆ ಡಿಸಿಎಂ ಲಕ್ಷ್ಮಣ ಸವದಿ ಸೂಚನೆ

ಮಹಾಂತೇಶ ಇರಳಿ
ರಾಯಚೂರು: ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಳ್ಳಗೊಂಡೊರುವ ಕ್ರಮಗಳ ಕುರಿತು ಇಂದು ವಿಡಿಯೋ ಸಂವಾದ ನಡೆಸಿ ಚರ್ಚೆ ನಡೆಸಿದರು.
ನಗರದ ಜಿಲ್ಲಾಧಿಕಾರಿಯವರ ಕಚೇರಿಯ ವಿಸಿ ಹಾಲ್ ನಲ್ಲಿ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಡಿಸಿಎಂ ಅವರಿಗೆ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಸವಿವರ ಮಾಹಿತಿ ನೀಡಿದರು.,
ಈ ವೇಳೆ ಡಿಸಿಎಂ ಮಾಸ್ಕ್, ಸಮಾಜಿಕ ಅಂತರ ಕಾಯ್ದುಕೊಳುವುದು, ಜೊತೆಗೆ ಮಾರ್ಗಸೂಚಿ ಉಲ್ಲಂಗೆ ಮಾಡಿ ಅನಗತ್ಯ ಓಡಾಟ ನಡೆಸಿದವರ ಮೇಲೆ ನಿರ್ಧಾಕ್ಷಣ ಕ್ರಮ ಕೈ ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರಿಗೆ ಸೂಚನೆ ನೀಡಿದರು.
ವಿಡಿಯೋ ಸಂವಾದದಲ್ಲಿ ರಾಯಚೂರು ನಗರ ಶಾಸಕರಾದ ಡಾ. ಶಿವರಾಜ ಪಾಟೀಲ್, ಮಾನವಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಸಂಸದ ರಾಜಾ ಅಮರೇಶ್ವರ ನಾಯಕ, ಕೊಪ್ಪಳ ಶಾಸಕ ಕರಡಿ ಸಂಗಣ್ಣ, ಜಿ.ಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಎಸ್ಪಿ ಪ್ರಕಾಶ್ ನಿಕ್ಕಂ, ಎಡಿಸಿ ದುರುಗೇಶ್, ಡಿಎಚ್ಒ ಡಾ. ರಾಮಕೃಷ್ಣ, ತಹಶಿಲ್ದಾರ್, ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಇದ್ದರು.