ಸಿದ್ದರಾಮಯ್ಯ ವಿರುದ್ಧ ಜಗದೀಶ್ ಶೆಟ್ಟರ್ ಗರಂ

ಸಿದ್ದರಾಮಯ್ಯಗೆ ಕ್ಲಾಸ್ ತೆಗೆದುಕೊಂಡ ಜಗದೀಶ್ ಶೆಟ್ಟರ್
ಶ್ರೀನಿವಾಸ ಪಟ್ಟಣ
ಧಾರವಾಡ: ಸರ್ಕಾರ ನಡೆಸುವ ಸಂದರ್ಭದಲ್ಲಿ ಸಾಕಷ್ಟು ಒತ್ತಡಗಳು ಇರುತ್ತೆ. ವಿರೋಧ ಪಕ್ಷದಲ್ಲಿದ್ದುಕೊಂಡು, ವಿರೋಧ ಪಕ್ಷದ ನಾಯಕರಾಗಿ ಸಿದ್ಧರಾಮಯ್ಯ ಸರ್ಕಾರಕ್ಕೆ ಸಲಹೆ, ಸೂಚನೆಗಳನ್ನು ನೀಡಬೇಕು.
ಅದನ್ನು ಬಿಟ್ಟು ಟೀಕೆ ಮಾಡೋದು ಸರಿಯಲ್ಲ ಎಂದು ಕೈಗಾರಿಕ ಸಚಿ ಜಗದೀಸ್ ಶೆಟ್ಟರ ಅವರು ಗರಂ ಅಗಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪರಿಸ್ಥಿತಿ ನಿಭಾಯಿಸುವಲ್ಲಿ ಸಾಕಷ್ಟು ಒತ್ತಡಗಳಿವೆ. ಸದ್ಯದ ಪರಿಸ್ಥಿತಿ ನೋಡಿದ್ರೆ, ಇದು ಟೀಕೆ ಮಾಡುವ ಕಾಲವು ಅಲ್ಲ.ಈ ಸಂಬಂಧ ಸಲಹೆಗಳನ್ನು ನೀಡಲಿ. ಅದನ್ನು ಬಿಟ್ಟು ತುಘಲಕ್ ಆಡಳಿತ ಎಂದು ಟೀಕಿಸೋದು ಸರಿಯಲ್ಲ. ಸಿದ್ದರಾಮಯ್ಯರ ಈ ಪ್ರವೃತ್ತಿಯನ್ನು ಜನ ಇಷ್ಟಪಡಲ್ಲ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಮೇಲೆ ಒತ್ತಡಗಳಿವೆ. ವಿರೋಧ ಪಕ್ಷಗಳು ರಾಜಕೀಯ ಮಾತುಗಳನ್ನು ಆಡದೆ ರಚನಾತ್ಮಕ ಸಲಹೆಗಳನ್ನು ನೀಡಬೇಕು. ಸಚಿವನಾಗಿ ನನ್ನ ಸಹದ್ಯೋಗಿಗಳಿಗೆ ಕೋವಿಡ್ ನಿಯಮಗಳನ್ನು ಪಾಲಿಸಲು ತಿಳಿಸುತ್ತೇನೆ ಎಂದು ಅವರು ತಿಳಿಸಿದರು.
ರಾಜ್ಯ ಸರ್ಕಾರ ಕೋವಿಡ್ ತಾಂತ್ರಿಕ ತಜ್ಞರ ಸಲಹಾ ಸಮಿತಿ ಶಿಫಾರಸ್ಸಿ ಮೇಲೆ ಕೋವಿಡ್ ಸರಪಳಿ ಮುರಿಯುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ ಬೆಡ್‌ಗಳ ಸಮಸ್ಯೆ ಇಲ್ಲ. ಜಿಲ್ಲಾಧಿಕಾರಿಗಳು ಸ್ವತಃ ಖಾಸಗಿ ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಮಿಸಲಿಡಲು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ದಾಖಲಿಸಿ ಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ತಿಳಿಸಿದರು.