ಟಾಪ್ ಸ್ಟೋರಿ

ಭಾರತಕ್ಕೆ ಅಗತ್ಯ ನೆರವು ನೀಡುವುದಾಗಿ “ಕನ್ನಡದಲ್ಲಿ” ಟ್ವಿಟ್ ಮಾಡಿದ ಅಮೆರಿಕಾ ರಾಯಭಾರ ಕಚೇರಿ.

ಭಾರತಕ್ಕೆ ಅಗತ್ಯ ನೆರವು ನೀಡುವುದಾಗಿ “ಕನ್ನಡದಲ್ಲಿ” ಟ್ವಿಟ್ ಮಾಡಿದ ಅಮೆರಿಕಾ ರಾಯಭಾರ ಕಚೇರಿ.

ಮಹಾಂತೇಶ ಇರಳಿ

ದೆಹಲಿ: ದಕ್ಷಿಣ ಭಾರತದ ಮೂರು ಭಾಷೆಗಳಲ್ಲಿ ಚೆನ್ನೈನಲ್ಲಿರುವ ಅಮೆರಿಕಾ ರಾಯಭಾರ ಕಚೇರಿ ಟ್ವೀಟ್ ಮಾಡಿದ್ದು, ಕನ್ನಡ ಮಾತ್ರವಲ್ಲದೇ ತಮಿಳು ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿ, ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗುತ್ತಿರುವ ಭಾರತಕ್ಕೆ ಅಮೆರಿಕಾ ಸರ್ಕಾರ ಸಕಲ ನೆರವು ನೀಡಲು ಸಿದ್ಧ ಎಂದು ತಿಳಿಸಿದೆ.

‘ಭಾರತದಲ್ಲಿ ನೆರವು ನೀಡುವ ಕುರಿತಂತೆ ಟ್ವೀಟ್ ಮಾಡಿರುವ ಅಮೆರಿಕದ ಭದ್ರತಾ ಸಲಹೆಗಾರ ಜೇಕ್‌ ಸಲ್ಲಿವಾನ್‌, ಭಾರತದಲ್ಲಿ ಕೋವಿಡ್‌ ಸಾಂಕ್ರಾಮಿಕ ತೀವ್ರವಾಗಿರುವ ಬಗ್ಗೆ ಅಮೆರಿಕ ಕಳಕಳಿ ಹೊಂದಿದೆ. ಸಾಂಕ್ರಾಮಿಕದ ವಿರುದ್ಧ ಹೋರಾಡುವಾಗ ಭಾರತದ ನಮ್ಮ ಸ್ನೇಹಿತರು ಮತ್ತು ಸಹಭಾಗಿಗಳಿಗೆ ಹೆಚ್ಚಿನ ಸಾಮಗ್ರಿಗಳು ಮತ್ತು ಅಗತ್ಯ ಬೆಂಬಲ ನೀಡಲು ಶ್ರಮಿಸುತ್ತಿದ್ದೇವೆ’ ಎಂದು ಟ್ವೀಟ್ ಮಾಡಿದ್ದಾರೆ.

ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್‌ ಸಹ ಭಾರತದ ಕೋವಿಡ್‌ ಸ್ಥಿತಿಯ ಬಗ್ಗೆ ಟ್ವೀಟ್ ಮಾಡಿದ್ದು, ‘ಕೋವಿಡ್‌ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಭಾರತ ಸರ್ಕಾರದೊಂದಿಗೆ ಕೈಜೋಡಿಸಿ ನಿಕಟ ಬೆಂಬಲ ನೀಡುತ್ತಿದ್ದೇವೆ. ಭಾರತದ ನಾಗರಿಕರು ಮತ್ತು ಆರೋಗ್ಯ ಕ್ಷೇತ್ರದ ಹೋರಾಟಗಾರರಿಗೆ ಹೆಚ್ಚುವರಿ ಬೆಂಬಲವನ್ನು ಕ್ಷಿಪ್ರವಾಗಿ ನಿಯೋಜಿಸುತ್ತೇವೆ’ ಎಂದು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!