45 ಕೋಟಿ ವೆಚ್ಚದಲ್ಲಿ ಅಥಣಿ ತಾಲ್ಲೂಕಿನ 9 ಗ್ರಾಮಗಳಿಗೆ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ಅಸ್ತು: ಡಿಸಿಎಂ ಸವದಿ ಸಂತಸ

45 ಕೋಟಿ ವೆಚ್ಚದಲ್ಲಿ ಅಥಣಿ ತಾಲ್ಲೂಕಿನ 9 ಗ್ರಾಮಗಳಿಗೆ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ಅಸ್ತು: ಡಿಸಿಎಂ ಸವದಿ ಸಂತಸ
ಶ್ರೀನಿವಾಸ ಪಟ್ಟಣ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ 8 ಗ್ರಾಮಗಳಿಗೆ 45.39 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆಗೆ ರಾಜ್ಯ ಸಚಿವ ಸಂಪುಟವು ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿರುವ ಅವರು, ಅಥಣಿ ತಾಲೂಕಿನ 9 ಗ್ರಾಮಗಳಿಗೆ ಕಾಡುತ್ತಿದ್ದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಉದ್ದೇಶದಿಂದ ಸರ್ಕಾರದ ಮುಂದೆ ಬೇಡಿಲೆ ಇಡಲಾಗಿತ್ತು, ಆದರೆ ಇಂದು ನಡದ ಸಚಿವ ಸಂಪುಟವು ಈ ಯೋಜನೆಗೆ ಅನುಮೋದನೆ ನೀಡಿದೆ.
ಕೇಂದ್ರದ “ಜಲ ಜೀವನ್ ಮಿಷನ್” ಯೋಜನೆಯಡಿ 18.12 ಕೋಟಿ ರೂ.ಗಳನ್ನು, ಆರ್.ಐ.ಡಿ.ಎಫ್. (ನಬಾರ್ಡ್) ನಿಂದ 15.40 ಕೋಟಿ ರೂ.ಗಳನ್ನು ಮತ್ತು ರಾಜ್ಯ ಸರ್ಕಾರದಿಂದ 11.87 ಕೋಟಿ ರೂ. ಹೀಗೆ ಒಟ್ಟು 54 ಕೋಟಿರೂಪಾಯಿಗಳ ಅನುದಾನದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲು ಸಂಪುಟವು ಹಸಿರುನಿಶಾನೆ ನೀಡಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಅಡಿಯಲ್ಲಿ 15 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಅವರಖೋಡ, ನಾಗನೂರ ಪಿ.ಕೆ, ದೊಡವಾಡ, ನಂದೇಶ್ವರ, ಸವದಿ, ಹಲ್ಯಾಳ, ಹುಲಗಬಾಳ, ಸಂಕೋನಟ್ಟಿ ಗ್ರಾಮಗಳಿಗೆ ಕೃಷ್ಣಾ ನದಿಯಿಂದ ಕುಡಿಯುವ ನೀರು ಪೂರೈಕೆ ಸಾಧ್ಯವಾಗಿ ಸ್ಥಳೀಯರಿಗೆ ಅನುಕೂಲವಾಗಲಿದೆ ಎಂದು ಡಿಸಿಂ ಅವರು ಸಂತಸ ವ್ಯಕ್ತ ಪಡಿಸಿದ್ದಾರೆ