ಚುನಾವಣಾ ಫಲಿತಾಂಶದ ದಿನ ಜನ ಸೇರಲು ಬ್ರೇಕ್ ಹಾಕಿದ ಚುನಾವಣಾ ಆಯೋಗ..!

ಚುನಾವಣಾ ಫಲಿತಾಂಶದ ದಿನ ಜನ ಸೇರಲು ಬ್ರೇಕ್ ಹಾಕಿದ ಚುನಾವಣಾ ಆಯೋಗ..!
ಮಹಾಂತೇಶ ಇರಳಿ
ದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೇಲೆಯಲ್ಲಿ ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್ ಹೈಕೋರ್ಟ್ ಹೇಳಿತು. ಇದರ ಬೆನ್ನಲ್ಲೇ, ಮೇ.02ರಂದು ಮೆರವಣಿಗೆ ನಡೆಸಬಾರದು ಎಂದು ಕೇಂದ್ರ ಚುನಾವಣಾ ಆಯೋಗ ಮಹತ್ವದ ಆದೇಶವನ್ನು ಹೊರಡಿಸಿದೆ.
ಮೇ.2ರಂದು ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ ಹಾಗೂ ತಮಿಳುನಾಡು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಮತ್ತು ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಘೋಷಣೆಯಾಗಲಿದೆ.
ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕು ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಮತ ಎಣಿಕೆ ಸಮಯದಲ್ಲಿ ಮತ್ತು ಫಲಿತಾಂಶ ಘೋಷಣೆಯಾದ ಬಳಿಕ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಯಾವುದೇ ರೀತಿಯ ಮೆರವಣಿಗೆ ನಡೆಸುವಂತಿಲ್ಲ. ಮತ ಏಣಿಕೆ ಕೇಂದ್ರದಲ್ಲಿ ಅಭ್ಯರ್ಥಿಗಳ ಬೆಂಬಲಿಗರು ಸೇರುವಂತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.