ಮತ ಎಣಿಕೆ ದಿನ “ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ”:ADC ಯೋಗೇಶ್ವರ

ಮತ ಎಣಿಕೆ ದಿನ “ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ”: ಎಡಿಸಿ.
ಶ್ರೀನಿವಾಸ ಪಟ್ಟಣ
ಬೆಳಗಾವಿ: ಮೇ 2 ರಂದು ಬೆಳಗಾವಿ ಲೋಕಸಭಾ ಮತಕ್ಷೇದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮುಂಜಾನೆ 8 ಗಂಟೆಯಿಂದ ನಗರದ ರಾಣಿ ಪಾರ್ವತಿ ದೇವಿ ಮಹಾವಿದ್ಯಾಲಯದಲ್ಲಿ ನಡೆಯಲಿದ್ದು, ಮತ ಎಣಿಕೆ ಕೇಂದ್ರಕ್ಕೆ ಕೋವಿಡ್-19 ವರದಿ ಕಡ್ಡಾಯವಾಗಿರುತ್ತದೆ ಎಂದು ಎಡಿಸಿ ಯೋಗೇಶ್ವರ್ ಎಸ್. ಅವರು ತಿಳಿಸಿದ್ದಾರೆ.
ಮತ ಎಣಿಕೆ ದಿನದಂದು ಅಭ್ಯರ್ಥಿಗಳು, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮತ ಎಣಿಕೆ ಸಿಬ್ಬಂದಿ, ಮತ ಎಣಿಕೆ ಎಜೆಂಟರುಗಳಿಗೆ ತಪ್ಪದೇ ಕೋವಿಡ್-19 ನೆಗೆಟಿವ್ ವರದಿ ಸಲ್ಲಿಸಬೇಕು. ಕೋವಿಡ್-19 ನೆಗೆಟಿವ್ ವರದಿ ಇದ್ದಂತಹ ವ್ಯಕ್ತಿಗಳಿಗೆ ಮಾತ್ರ ಮತ ಎಣಿಕೆ ಕೇಂದ್ರದಲ್ಲಿ ಪ್ರವೇಶವಿರುತ್ತದೆ.
ಜನತಾ ಕರ್ಫೂ ಇರುವುದರಿಂದ ಮತ ಎಣಿಕೆ ಸಿಬ್ಬಂದಿಗಳು ಹಾಗೂ ಇನ್ನಿತರ ಕಾರ್ಯಗಳಿಗೆ ನಿಯೋಜಿತ ಸಿಬ್ಬಂದಿಗಳು ತಮ್ಮ ಗುರುತಿನ ಚೀಟಿ ತೋರಿಸಿದ್ದಲ್ಲಿ ಅವರಿಗೆ ಹಾಗೂ ಅವರ ವಾಹನಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಪ್ರವೇಶಿಸುವ ಅವಕಾಶ ಕಲ್ಪಿಸಲಾಗಿದೆ. ನಿಗದಿತ ಪ್ರದೇಶದಲ್ಲಿ ವಾಹನ ನಿಲುಗಡೆಯ ಕುರಿತು ಕ್ರಮ ವಹಿಸಲಾಗುವುದು.
ಕೋವಿಡ್-19 ಮಾರ್ಗಸೂಚಿಯನ್ವಯ ಎಲ್ಲಾ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಮತ ಎಣಿಕೆ ಕಾರ್ಯವನ್ನು ಸುವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ಜರುಗಿಸಲು ಎಲ್ಲರೂ ಸಹಕಾರ ನೀಡುವಂತೆ ಅಪರ ಜಿಲ್ಲಾಧಿಕಾರಿಗಳಾದ ಯೋಗೇಶ್ವರ್ ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.