ಟಾಪ್ ಸ್ಟೋರಿ

ಭಾರತದಲ್ಲಿ ಇನ್ನೂ ಹೆಚ್ಚು ಕೋವಿಡ್-19 ಹರಡಬಹುದು: WHO

ಮಹಾಂತೇಶ ಇರಳಿ

ದೆಹಲಿ:ಭಾರತದ ಜನರು ಅನಗತ್ಯವಾಗಿ ಆಸ್ಪತ್ರೆಗೆ ಧಾವಿಸುತ್ತಿದ್ದು, ಕೊರೋನಾ ಲಸಿಕೆ ನೀಡುವ ಸಂಖ್ಯೆಯೂ ಸಾಕಷ್ಟು ಕಡಿಮೆ ಇದೆ. ಇದೇ ಕಾರಣಕ್ಕೆ ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಅಧಿಕವಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯ ಪಟ್ಟಿದೆ.

ಭಾರತದಲ್ಲಿ ಈಗಾಗಲೇ ದಿನವೊಂದಕ್ಕೆ 3.5 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಕೊರೋನಾ ಪ್ರಕರಣಗಳು ದಾಖಲಾಗುತ್ತಿದ್ದು, ಸಾವಿನ ಸಂಖ್ಯೆಯೂ 2 ಲಕ್ಷದ ಗಡಿ ದಾಟಿದೆ. ಆಸ್ಪತ್ರೆಗಳಲ್ಲಿ ಆಮ್ಲಜನಕ, ವೆಂಟಿಲೇಟರ್​ ಹಾಗೂ ಬೆಡ್​ ಕೊರತೆಯಿಂದಾಗಿ ಸಾವಿನ ಸಂಖ್ಯೆ ಮತ್ತಷ್ಟು ಅಧಿಕವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

“ಭಾರತದಲ್ಲಿ ಪ್ರಸ್ತುತ ಸಮಸ್ಯೆಯ ಒಂದು ಭಾಗವೆಂದರೆ, ಅನೇಕ ಜನರು ಆಸ್ಪತ್ರೆಗೆ ಧಾವಿಸುತ್ತಿರುವ ಕಾರಣ ಕೊರೋನಾ ಸಂಖ್ಯೆ ಮತ್ತಷ್ಟು ಅಧಿಕವಾಗುತ್ತಿದೆ” ಎಂದು
WHO ವಕ್ತಾರ ತಾರಿಕ್​ ಜಸರೆವಿಕ್ ಹೇಳಿದ್ದಾರೆ.

“ಇತರೆ ದೇಶಗಳಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿದಂತೆ ಭಾರತದಲ್ಲಿ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಸಾರ್ವಜನಿಕ ಸಭೆಗಳನ್ನು ನಿರ್ಬಂಧಿಸಿದ್ದರೆ ಭಾರತದಲ್ಲಿ ಕೊರೋನಾ ರಣಕೇಕೆ ಹತೋಟಿಗೆ ತರಬಹುದಿತ್ತು” ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!