ಕರ್ನಾಟಕ
ಲಾಕ್ ಡೌನ್ ಯಶಸ್ವಿಗೊಳಿಸಲು ಡಿಸಿಎಂ ಲಕ್ಷ್ಮಣ ಸವದಿ ಮನವಿ

14 ದಿನ ಲಾಕ್ ಡೌನ್ ಯಶಸ್ವಿಗೊಳಿಸಲು ಡಿಸಿಎಂ ಲಕ್ಷ್ಮಣ ಸವದಿ ಮನವಿ
ಶ್ರೀನಿವಾಸ ಪಟ್ಟಣ
ಬೆಂಗಳೂರು: ನಾಡಿನ ಜನತೆಯ ಹಿತದೃಷ್ಟಿಯಿಂದ ಹಾಗೂ ಅಪಾಯಕಾರಿ ಕೋವಿಡ್ ಪಿಡುಗನ್ನು ನಿಯಂತ್ರಿಸುವ ಉದ್ದೇಶದಿಂದ ಮೇ 10 ರಿಂದ ಮೇ 24ರ ವರೆಗೆ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ್ದು, ಜನರು ಸಹಕರಿಸಬೇಕು ಎಂದು ಡಿಸಿಎಂ ಲಕ್ಷ್ಮಣ ಸವದಿ ಅವರು ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವುದು ಅನಿವಾರ್ಯವಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ಆದರೂ ಸಹ ಸಮಾಜದ ಹಿತದೃಷ್ಟಿಯಿಂದ ಸರ್ಕಾರ ಕೈಗೊಂಡಿರುವ ಈ ಕ್ರಮಕ್ಕೆ ರಾಜ್ಯದ ಜನತೆ ಕೈಜೋಡಿಸಬೇಕು ಎಂದು ಡಿಸಿಎಂ ಲಕ್ಷ್ಮಣ ಸವದಿ ಅವರು ವಿನಂತಿಸಿದ್ದಾರೆ.