ಜನರ ಮೇಲೆ ಪೊಲೀಸರು ಯಾಕೆ ಬಲ ಪ್ರಯೋಗ ಮಾಡುತ್ತಿದ್ದಾರೆ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ..?

ಜನರ ಮೇಲೆ ಪೊಲೀಸರು ಯಾಕೆ ಬಲ ಪ್ರಯೋಗ ಮಾಡುತ್ತಿದ್ದಾರೆ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ..?
ಮಹಾಂತೇಶ ಇರಳಿ
ಬೆಂಗಳೂರ: ರಾಜ್ಯದಲ್ಲಿ ಮೊದಲ ದಿನ ಪೊಲೀರು ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಈ ಸಂಬಂಧಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಪೀಠ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗ ಮಾಡಬಾರದು ಎಂದು ಸೂಚನೆ ನೀಡಿದೆ.
ಅರ್ಜಿದಾರರ ಪರ ವಕೀಲರು, ಪೊಲೀಸರು ಸಾರ್ವಜನಿಕರ ಮೇಲೆ ಅನಗತ್ಯ ಬಲಪ್ರಯೋಗ ಮಾಡುತ್ತಿದ್ದಾರೆ. ಸಿಕ್ಕ ಸಿಕ್ಕವರನ್ನು ಲಾಠಿಯಿಂದ ಹೊಡೆಯುತ್ತಿದ್ದಾರೆ ಎಂದು ಕೋರಿ ದೂರಿದ್ದರು. ಕಳೆದ ವರ್ಷ ಮಾರ್ಚ್ 30 ರಂದು ಅನಗತ್ಯವಾಗಿ ಬಲಪ್ರಯೋಗ ಮಾಡದಂತೆ ಹೈಕೋರ್ಟ್ ನಿರ್ದೇಶನ ನೀಡಿದೆ ಅಲ್ಲವೇ ಎಂದು ಇದೇ ವೇಳೆ ಹೈಕೋರ್ಟ್ ಪ್ರಶ್ನಿಸಿದೆ.
ಎಜಿ ಪ್ರಭುಲಿಂಗ ನಾವದಗಿ ಬಲಪ್ರಯೋಗ ಮಾಡುತ್ತಿಲ್ಲ. ಜಾಗೃತಿ ಮೂಡಿಸಲಾಗುತ್ತಿದೆ. ಪೊಲೀಸ್ ಮಹಾನಿರ್ದೇಶಕರೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳಲು ತಿಳಿಸಲಾಗುವುದು ಎಂದು ಹೇಳಿದ್ದಾರೆ. ಹೈಕೋರ್ಟ್ ಜನ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸರ್ಕಾರಕ್ಕೆ ಅಗತ್ಯ ಸಹಕಾರ ಕೊಡಬೇಕು. ಅನಗತ್ಯವಾಗಿ ಬಲಪ್ರಯೋಗ ಮಾಡದಂತೆ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ತಿಳಿಸಿದ್ದು, ಮೇ 13 ಕ್ಕೆ ವಿಚಾರಣೆ ಮುಂದೂಡಿದೆ.