ಕೊರೊನಾ ರೋಗಿಗಳ ಪ್ರಾಣ ಉಳಿಸೋ ಸಂಜೀವಿನಿ ಆದ ಡಿಸಿಎಂ ಲಕ್ಷ್ಮಣ ಸವದಿ

ಸ್ವಂತ ಹಣದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿದ ಡಿಸಿಎಂ ಲಕ್ಷ್ಮಣ ಸವದಿ
ಶ್ರೀನಿವಾಸ ಪಟ್ಟಣ
ಅಥಣಿ: ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 60 ಹಾಸಿಗೆವುಳ್ಳ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿವಾಗುತ್ತಿದ್ದು, ನಾಳೆಯಿಂದ ಅಧಿಕೃತವಾಗಿ ಚಾಲನೆ ಆಗಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ. ಈ ಮೂಲಕ ಅಥಣಿ ಮತಕ್ಷೇತ್ರದ ಜನರಿಗೆ ಡಿಸಿಎಂ ಲಕ್ಷ್ಮಣ ಸವದಿ ಪ್ರಾಣ ಉಳಿಸೋ ಸಂಜೀವಿನಿ ಆಗಿದ್ದಾರೆ.
ಕೊರೋನ ಮಹಾಮಾರಿಯಿಂದಾಗಿ ಹೊರಗಡೆಯ ಆಸ್ಪತ್ರೆಗಳಲ್ಲಿ ಬೆಡ್ ಆಕ್ಸಿಜನ್ ಸಿಗದೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಡಿಸಿಎಂ ಅವರು
ಸ್ವತಃ 50 ಲಕ್ಷ ರೂಪಾಯಿ ಖರ್ಚು ಮಾಡಿ, 10 ಲೀಟರ್ ಹಾಗೂ 15 ಲೀಟರ್ ಸಾಮರ್ಥ್ಯವುಳ್ಳ 50 ಆಕ್ಸಿಜನ್ ಕಾನ್ಸಟ್ರೇಟರ್ ಗಳನ್ನು ಈಗಾಗಲೇ ಖರೀದಿಸಿದ್ದು, ನಾಳೆಯಿಂದ ಕಾರ್ಯಾರಂಭ ಆಗಲಿದೆ.
ಅಥಣಿ ಭಾಗದ ಜನರ ಚಿಕಿತ್ಸೆಗಾಗಿ ಆಕ್ಸಿಜನ್ ಕಾನ್ಸಟ್ರೇಟರ್ ಕಿಟ್ ಜೊತೆಗೆ ಜ್ವರ ಪರೀಕ್ಷೆ ಮಾಡುವ ಥರ್ಮಾಮೀಟರ್, ಸ್ಯಾಚುರೇಷನ್ ಹಾಗೂ ಪಲ್ಸ್ ಚೆಕ್ ಮಾಡುವ ಆಕ್ಸಮೀಟರ್ ಕಿಟ್ ಗಳನ್ನು ನೀಡಲಾಗುತ್ತಿದೆ, ಜೊತೆಗೆ ಆಕ್ಸಿಜನ್ ಕಾನ್ಸಟ್ರೇಟರ್ ಹಾಗೂ ಬೆಡ್ ನೀಡಲಾಗುತ್ತಿದೆ.
ಕೋರೋನ ಪಾಸಿಟಿವ್ ಬಂದರೆ ಉದಾಸೀನತೆ ತೋರದೆ ಕೂಡಲೇ ಚಿಕಿತ್ಸೆ ಪಡೆಯಬೇಕು. ಯಾರು ಭಯಪಡಬಾರದು, ಭಯದಿಂದಾಗಿಯೇ ಅನೇಕ ಜನ ಸಾಯುತ್ತಿದ್ದಾರೆ. ಎಲ್ಲರೂ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.