ಕರ್ನಾಟಕ

SSLC ಪರೀಕ್ಷೆ ಮುಂದೂಡಿಕೆ

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ..!

ಮಹಾಂತೇಶ ಇರಳಿ

ಬೆಂಗಳೂರು: ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.‌

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್-19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಸುರೇಶ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

.

Related Articles

Leave a Reply

Your email address will not be published. Required fields are marked *

Back to top button
error: Content is protected !!