ಗುಡ್ ನ್ಯೂಸ್
50 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಗೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ..!

50 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಗೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ..!
ಶ್ರೀನಿವಾಸ ಪಟ್ಟಣ
ಅಥಣಿ: ಅಥಣಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 50 ಹಾಸಿಗೆವುಳ್ಳ ಕೋವಿಡ್ ಕೇರ್ ಸೆಂಟರ್ ಗೆ ಡಿಸಿಎಂ ಲಕ್ಷ್ಮಣ ಸವದಿ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದ್ದಾರೆ.
ಕೊರೋನಾ ಮಹಾಮಾರಿಯಿಂದಾಗಿ ಹೊರಗಡೆಯ ಆಸ್ಪತ್ರೆಗಳಲ್ಲಿ ಬೆಡ್ ಆಕ್ಸಿಜನ್ ಸಿಗದೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಡಿಸಿಎಂ ಅವರು ಸ್ವತಃ 50 ಲಕ್ಷ ರೂಪಾಯಿ ಖರ್ಚು ಮಾಡಿ, 10 ಲೀಟರ್ ಹಾಗೂ 15 ಲೀಟರ್ ಸಾಮರ್ಥ್ಯವುಳ್ಳ 50 ಆಕ್ಸಿಜನ್ ಕಾನ್ಸಟ್ರೇಟರ್ ಗಳನ್ನು ಖರೀದಿಸಿ, ಕೋವಿಡ್ ಕೇರ್ ಸೆಂಟರ್ ಗೆ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಆರ್,ಎಸ್,ಎಸ್ ನ ಪ್ರಾಂತ ಸಂಘ ಚಾಲಕರಾದ ಅರವಿಂದ ದೇಶಪಾಂಡೆ, ಮುಖಂಡರಾದ ಡಾಕ್ಟರ್ ರವೀಂದ್ರ ನಾಯಕ್, ತಾಲೂಕು ವೈದ್ಯಾಧಿಕಾರಿಗಳಾದ ಬಸವರಾಜ್ ಡಂಗಿ, ಬಿಜೆಪಿಯ ಯುವ ಮುಖಂಡ ಚಿದಾನಂದ ಸವದಿ ಉಪಸ್ಥಿತರಿದ್ದರು.