ಕೃಷಿ ಕಾನೂನು ವಿರೊಧಿಸಿ ರೈತರ ಹೋರಾಟ: ರೈತರ ಮೇಲೆ ಪೊಲೀಸರ ಲಾಠಿ ಚಾರ್ಜ್…

ಕೃಷಿ ಕಾನೂನು ವಿರೊಧಿಸಿ ರೈತರ ಹೋರಾಟ: ರೈತರ ಮೇಲೆ ಪೊಲೀಸರ ಲಾಠಿ ಚಾರ್ಜ್…
ಶ್ರೀನಿವಾಸ ಪಟ್ಟಣ
ಹರಿಯಾಣ: ರೈತ ವಿರೋಧಿ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 6 ತಿಂಗಳಿನಿಂದ,ಹೋರಾಟ ನಡೆಯುತ್ತಿದ್ದು, ಈ ಕಾನೂನುಗಳನ್ನು ಬೆಂಬಲಿಸುತ್ತಿರುವ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಹಿಸ್ಸಾರ್ ಜಿಲ್ಲೆಗೆ ಭೇಟಿ ನೀಡಿದಕ್ಕಾಗಿ ಅಲ್ಲಿಯ ರೈತರು ಪ್ರತಿಭಟನೆಯ ಬಿಸಿ ಮುಟ್ಟಿಸಿದ್ದಾರೆ.
ಪ್ರತಿಭಟನೆ ನಡೆಸಿದ್ದಕ್ಕಾಗಿ ಹರಿಯಾಣ ಪೊಲೀಸರು ರೈತರ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಹಲವಾರು ರೈತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರು ಪ್ಲಾಸ್ಟಿಕ್ ಗುಂಡುಗಳನ್ನು ಹಾರಿಸಿದ್ದಾರೆ ಮತ್ತು ಹಲವಾರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ತೆಗೆದ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಬಳಸಿದ್ದಾರೆ.
ಘಟನೆಯ ನಂತರ ಸುಮಾರು ಎರಡು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ 9 ಯನ್ನು ರೈತರು ತಡೆದಿದ್ದರು. ಹಿಸಾರ್‌ಗೆ ಆಗಮಿಸಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ, ಬಂಧಿಸಿರುವ ಎಲ್ಲ ರೈತರನ್ನು ಬಿಡುಗಡೆ ಮಾಡದಿದ್ದರೆ, ಪ್ರತಿಭಟನಾಕಾರರು ಹರಿಯಾಣದ ಎಲ್ಲಾ ಪೊಲೀಸ್ ಠಾಣೆಗಳನ್ನು ಘೇರಾವ್ ಹಾಕಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.