ಜುಲೈ ಅಂತ್ಯಕ್ಕೆ ಪಿಯುಸಿ ರಿಸಲ್ಟ್: ಸಚಿವ ಸುರೇಶ್ ಕುಮಾರ್

ಜುಲೈ ಅಂತ್ಯಕ್ಕೆ ಪಿಯುಸಿ ರಿಸಲ್ಟ್: ಸಚಿವ ಸುರೇಶ್ ಕುಮಾರ್
ಶ್ರೀನಿವಾಸ ಪಟ್ಟಣ
ಬೆಂಗಳೂರು: ಕೇವಿಡ್ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿರು ದ್ವಿತೀಯ ಪಿಯುಸಿ ಪರೀಕ್ಷೆ ಗ್ರೇಡಿಂಗ್ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟವಾಗಲಿದ್ದು, ಪಿಯುಸಿ ಫಲಿತಾಂಶ ನೀಡಲು ಪ್ರಥಮ ಪಿಯುಸಿ ಅಂಕಗಳ ಜೊತೆಗೆ ಎಸ್ಎಸ್ಎಲ್ಸಿ ಅಂಕಗಳನ್ನು ಕೂಡ ಗಣನೆಗೆ ತೆಗೆದುಕೊಳ್ಳುವುದಾಗಿ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಅವರು, ಪಿಯುಸಿ ವಿದ್ಯಾರ್ಥಿಗ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು ಈ ತೀರ್ಮಾನ ಕೈಗೊಂಡಿರುವುದಾಗಿ ಸಚಿವರು ಹೇಳಿದ್ದಾರೆ. ಹೆಚ್ಚು ನ್ಯಾಯಯುತವಾಗಲು ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಫಲಿತಾಂಶಗಳನ್ನೂ ಅವಲೋಕನ ಮಾಡಲಿದ್ದೇವೆ. ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡುತ್ತೇವೆ ಎಂದಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಗಳ ನಡುವೆ ಸಮತೋಲನ ತರಲು ಈ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೊದಲ ಪಿಯು ಅಂಕಗಳಲ್ಲದೇ ಎಸ್.ಎಸ್.ಎಲ್.ಸಿ ಫಲಿತಾಂಶವನ್ನೂ ಪರಿಗಣಿಸಿ ಅದಕ್ಕೆ ಸಮನಾದ ಸೂಕ್ತ ಮೌಲ್ಯವನ್ನು ಸೇರ್ಪಡಿಸಿ, ಗ್ರೇಡಿಂಗ್ ಫಲಿತಾಂಶವನ್ನು ನೀಡಲು ಸಹ ನಿರ್ಧಾರ ಮಾಡಿದ್ದೇವೆ ಎಂದರು.
ಸೋಂಕು ಕಡಿಮೆಯಾದ ಮೇಲೆ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾಗಿದೆಯೆಂದೂ ಘೋಷಿಸಿದ್ದೇವೆ. ದ್ವಿತೀಯ ಪಿಯು ಅಂಕಗಳನ್ನು ಸಿಇಟಿ ಪರೀಕ್ಷೆಗೆ ಪರಿಗಣಿಸಿ ಫಲಿತಾಂಶವನ್ನು ಘೋಷಿಸಲಾಗುತ್ತದೆ. ಈ ಬಾರಿಯ ಗ್ರೇಡಿಂಗ್ ಫಲಿತಾಂಶವು ವಿದ್ಯಾರ್ಥಿಗಳ ಪ್ರತಿಭೆಯನ್ನು ಖಚಿತವಾಗಿ ವ್ಯಕ್ತಪಡಿಸಿದರೂ, ನಿರಾಕರಿಸಿ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಿದೆ ಎಂದು ಸಚಿವರು ಹೇಳಿದ್ದಾರೆ.
ಈ ವರ್ಷದ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಯಾವ ರೀತಿ ಗ್ರೇಡ್ ಕೊಡಬಹುದು. ಅವ್ರ ಕಲಿಕೆ ಬಗ್ಗೆ ಏನ್ ಮಾಡಬಹುದು ಎಂದು ತಿಳಿದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಪರೀಕ್ಷೆ ರದ್ದು ಬಗ್ಗೆ ಕೇಳಿದ್ದೇವೆ. ನಮ್ಮ ರಾಜ್ಯದಲ್ಲಿ ಈ ವರ್ಷ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದೇವೆ. ಎಲ್ಲಾ ಪಿಯುಸಿ ವಿದ್ಯಾರ್ಥಿಗಳಿಗೆ ಗ್ರೇಡ್ ಮುಖಾಂತರ ಅಂಕ ನೀಡ್ತೇವೆ ಎಂದು ಸುರೇಶ್ ಕುಮಾರ್ ನಿನ್ನೆ ಹೇಳಿದ್ದರು.