ಸಿಎಂ ಯಡಿಯೂರಪ್ಪ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು

ಸಿಎಂ ಬದಲಾವಣೆಗೆ ಮುಹೂರ್ತ ಕೂಡಿ ಬಂದಿದೆ..! ಸತೀಶ ಜಾರಕಿಹೊಳಿ
ಶ್ರೀನಿವಾಸ ಪಟ್ಟಣ
ಗೋಕಾಕ: ಸಿಎಂ ರಾಜೀನಾಮೆ ನೀಡುವುದು, ಬಿಡುವುದು ಅವರ ಪಕ್ಷದ ಆಂತರಿಕ ವಿಚಾರ. ರಾಜೀನಾಮೆ ಕೊಡುವುದು, ಹೊಸ ಮುಖ್ಯಮಂತ್ರಿ ನೇಮಿಸುವುದು ಅವರಿಗೆ ಬಿಟ್ಟಿದ್ದು. ಇದರಿಂದ ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ನೇರವಾಗಿ ಮುಂಬರುವ ವಿಧಾನಸಭೆ ಚುನಾವಣೆಯೊಂದೇ ನಮ್ಮ ಗುರಿ” ಎಂದು ಸತೀಶ ತಿಳಿಸಿದರು.
ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಮಾದ್ಯಮಗಳ ಜೊತೆ ಮಾತನಾಡಿದ ಅವರು,”ಪಕ್ಷದ ಎಲ್ಲರನ್ನು ಒಟ್ಟಿಗೆ ಕರೆದೊಯ್ಯುವಲ್ಲಿ ವಿಫಲವಾಗಿರುವುದು ಹಾಗೂ ಸೂಕ್ತ ರೀತಿಯಲ್ಲಿ ಕೋವಿಡ್ ನಿರ್ವಹಣೆ ಮಾಡದೇ ಇರುವುದು ಯಡಿಯೂರಪ್ಪ ರಾಜೀನಾಮೆ ವಿಚಾರಕ್ಕೆ ಕಾರಣ ಇರಬಹುದು. ಇದು ರಾಜ್ಯದ ಜನರಿಗೆ ಗೊತ್ತಿದೆ” ಎಂದು ಅವರು ತಳಿಸಿದರು
“ಮುಖ್ಯಮಂತ್ರಿಗಳ ಬದಲಾವಣೆಗೆ ಬಿಜೆಪಿಯಲ್ಲಿ 6 ತಿಂಗಳಿನಿಂದಲೇ ಆಂತರಿಕವಾಗಿ ಪ್ರಯತ್ನಗಳು ನಡೆಯುತ್ತಿದ್ದವು. ಅನೇಕ ಶಾಸಕರು ಬಹಿರಂಗವಾಗಿಯೇ ಈ ಬಗ್ಗೆ ಹೇಳಿಕೆಯನ್ನೂ ನೀಡಿದ್ದರು. ಬಹುಶಃ ಸಿಎಂ ಬದಲಾವಣೆಗೆ ಈಗ ಕಾಲ ಕೂಡಿ ಬಂದಿರಬಹುದು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು.
“ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಿದರೂ ನಮ್ಮ ಪಕ್ಷಕ್ಕೆ ಲಾಭವಿದೆ. ನೀಡದಿದ್ದರೂ ನಮಗೆ ಲಾಭವಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.