ಕರ್ನಾಟಕ

ವಿದ್ಯಾರ್ಥಿಗಳಿಗೆ ಶಾಕ್: ಪಿಯುಸಿ ಫಲಿತಾಂಶಕ್ಕೆ ‘ಹೈಕೋರ್ಟ್`ತಡೆ

ವಿದ್ಯಾರ್ಥಿಗಳಿಗೆ ಶಾಕ್: ಪಿಯುಸಿ ಫಲಿತಾಂಶಕ್ಕೆ ‘ಹೈಕೋರ್ಟ್`ತಡೆ

ಶ್ರೀನಿವಾಸ ಪಟ್ಟಣ

ಬೆಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಿ, ಪ್ರಥಮ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಪಿಯುಸಿ ಫಲಿತಾಂಶ ಪ್ರಕಟಿಸಲು ಶಿಕ್ಷಣ ಸಚಿವ ಸುರೇಶ ಕುಮಾರ ಅವರು ತಿಳಿಸಿದರು. ಆದ್ರೆ, ಇದೀಗ ರಾಜ್ಯ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ತಡೆ ನೀಡಿದೆ.

ರಾಜ್ಯ ಸರ್ಕಾರ ಪಿಯುಸಿ ವಿದ್ಯಾರ್ಥಿಗಳನ್ಮು ಪಾಸ್ ಮಾಡುವ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ, ಹೈಕೋರ್ಟ್ ನ್ಯಾಯಪೀಠವು, ಗುರುವಾರದ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡದಂತೆ ತಡೆ ನೀಡಿ,

ಈ ಕುರಿತಂತೆ ರಾಜ್ಯ ಹೈಕೋರ್ಟ್ ನಲ್ಲಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠವು, ಕೇವಲ ಫ್ರೆಶರ್ಸ್ ವಿದ್ಯಾರ್ಥಿಗಳನ್ನು ಮಾತ್ರ ಪಾಸ್ ಮಾಡಿ, ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವಂತ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತ ಪಡಿಸಿ, ಫಲಿತಾಂಶ ಪ್ರಕಟ ಮಾಡದಂತೆ ತಡೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!