ಬೆಳಗಾವಿಯಲ್ಲಿ ಬಿಜೆಪಿ ಮೇಯರ್, ಉಪ ಮೇಯರ್ ಆಯ್ಕೆ ಖಚಿತ ಶಾಸಕ ಅನಿಲ್ ಬೆನಕೆ ವಿಶ್ವಾಸ

ಬೆಳಗಾವಿ ಪಾಲಿಕೆ: ಬಿಜೆಪಿ ಮೇಯರ್, ಉಪ ಮೇಯರ್ ಖಚಿತ ಶಾಸಕ ಅನಿಲ್ ಬೆನಕೆ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆ ಸ್ಪಷ್ಟ ಬಹುತೇಕ ಬರಲಿದ್ದು, ಬಿಜೆಪಿ ಮೇಯರ್, ಉಪ ಮೇಯರ್ ಆಗುವುದು ಖಚಿತ ಎಂದು ಬಿಜೆಪಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ನಗರದ ಧರ್ಮನಾಥ ಭವನದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ 25 ವರ್ಷಗಳ ಬಳಿಕ ಬಿಜೆಪಿ ಪಕ್ಷದ ಚಿನ್ಹೆ ಮೇಲೆ ಅಭ್ಯರ್ಥಿಗಳನ್ನ ಕಣಕ್ಕಿಳಿಸಲಾಗಿದೆ. ಪಾಲಿಕೆಯ 58 ವಾರ್ಡುಗಳಲ್ಲಿ ಬಿಜೆಪಿ ಗೆ ಯಾವುದೇ ಬಂಡಾಯವಿಲ್ಲ. ಬಹುತೇಕ ಬಿಜೆಪಿ ಮುಖಂಡರನ್ನ ಕಣದಿಂದ ಹಿಂದೆ ಸೇರಿಸಲಾಗಿದೆ. ಅವರೆಲ್ಲರೂ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ. ಈ ಬಾರಿ ಪಾಲಿಕೆಯಲ್ಲಿ ಬಿಜೆಪಿ ಮೇಯರ್, ಉಪ ಮೇಯರ್ ಅಧಿಕಾರದ ಚುಕ್ಕಾಣಿ ಹಿಡಯಲಿದ್ದಾರೆ. ಕೇಂದ್ರ ಮತ್ತು ರಾಜ್ಯದ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನ ಜನರ ಮುಂದೆ ಇಡುತ್ತಿದ್ದೇವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಮತ್ತು ಈ ಹಿಂದಿನ ಸಿಎಂ ಯಡಿಯೂರಪ್ಪನವರು ಕೊಟ್ಟ ಕೊಡುಗೆಗಳು ಹಾಗೂ ಇಂದಿನ ಸಿಎಂ ಬಸವರಾಜ ಬೋಮ್ಮಾಯಿ ಅವರ ಅಭಿವೃದ್ಧಿ ಕಾರ್ಯಗಳನ್ನ ಜನರ ಮುಂದೆ ಇಡುತ್ತೇವೆ. ನಾನು ಅಭಯ ಪಾಟೀಲರು ಇಬ್ಬರೂ ಬೆಳಗಾವಿ ಅಭಿವೃದ್ಧಿ ಗೆ ಸಾಕಷ್ಟು ಕೆಲಸ ಮಾಡಿದ್ದೇವೆ ಎಂದು ಅನಿಲ್ ಬೆನಕೆ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೋಲ್ಲೆ, ಶಾಸಕರಾದ ಅಭಯ ಪಾಟೀಲ್, ಸತೀಶ್ ರೆಡ್ಡಿ, ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ, ಸಂಸದ ಈರಣ್ಣ ಕಡಾಡಿ, ಎಂಎಲಸಿ ಮಹಾಂತೇಶ ಕವಟಗಿಮಠ ಸೇರಿ ಮಾಜಿ ಶಾಸಕರು, ಮುಖಂಡರು ಭಾಗವಹಿಸಿದ್ದರು.